ನೆಲ್ಯಾಡಿ: ಬಸ್ ಹಾಗೂ ಲಾರಿ ನಡುವೆ ಢಿಕ್ಕಿ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 27. ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಈಚರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ಸಿನಲ್ಲಿದ್ದ ಮಗು ಹಾಗೂ ತಂದೆ ಗಾಯಗೊಂಡಿರುವ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಬೆಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಅಡ್ಡಹೊಳೆಯಲ್ಲಿ ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮ ತಂದೆ ಹಾಗೂ ಮಗುವಿಗೆ ಗಾಯಗಳಾಗಿವೆ. ಅಲ್ಲದೇ ಈಚರ್ ಲಾರಿಯ ಚಾಲಕನಿಗೂ ಸಣ್ಣಪುಟ್ಟ ಗಾಯವಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ತಲಪಾಡಿ: ಸೊಸೈಟಿಯೊಳಗಡೆ ಅನುಮಾನಾಸ್ಪದವಾಗಿ ಮೂವರು ಮೃತ್ಯು ► ಸಿಡಿಲು ಬಡಿದಿರಬಹುದೆಂಬ ಶಂಕೆ

error: Content is protected !!