ಪೂಂಜಾಲಕಟ್ಟೆ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤‌ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಪುಂಜಾಲಕಟ್ಟೆ, ಆ. 29. ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.


ಮೃತ ವಿದ್ಯಾರ್ಥಿಯನ್ನು ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ ಶಫೀಕ್ ಎಂದು ಗುರುತಿಸಲಾಗಿದೆ. ಈತ ಕರಾಯದಿಂದ ಮಂಗಳೂರಿಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಇನ್ನೊಂದು ಬೈಕ್ ಢಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top