ಅರಂತೋಡು: ಉಕ್ಕಿ ಹರಿದ ಪಯಸ್ವಿನಿ ➤‌ ಹಲವು ಮನೆಗಳು ಜಲಾವೃತ

(ನ್ಯೂಸ್ ಕಡಬ) newskadaba.com ಅರಂತೋಡು, ಆ. 29. ಇಲ್ಲಿನ ಪಯಸ್ವಿನಿ ನದಿ ಉಕ್ಕಿ ಹರಿದ ಪರಿಣಾಮ ಹಲವೆಡೆ ನೀರು ನುಗ್ಗಿ ಅವಾಂತರ ಸೃಷ್ಠಿಸಿದ ಘಟನೆ ಸೋಮವಾರದಂದು ಮುಂಜಾನೆ ನಡೆದಿದೆ.

 

ಪಯಸ್ವಿನಿ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಉಕ್ಕಿ ಹರಿದು, ಬದಿಯ ಪ್ರದೇಶಗಳಿಗೆ ನೀರು ನುಗ್ಗಿದೆ. ಕೊಯನಾಡು ಶಾಲೆ ಬಳಿಯ 5 ಮನೆಗಳು ಜಲಾವೃತಗೊಂಡಿದ್ದು, ಮನೆಯವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಅಲ್ಲದೇ ಭಾರೀ ಗಾತ್ರದ ಮರಗಳು ನೀರಿನಲ್ಲಿ ಕೊಚ್ಚಿ ಬಂದು ಕೊಯನಾಡಿನ ಕಿಂಡಿ ಅಣೆಕಟ್ಟಿನಲ್ಲಿ ಅಡ್ಡಲಾಗಿ ನಿಂತಿವೆ. ಹಲವೆಡೆ ಕೃಷಿ, ತೋಟಗಳಿಗೆ ನೀರು ನುಗ್ಗಿದ್ದು, ಊರುಬೈಲು, ಚೆಂಬು ಭಾಗದಲ್ಲಿ ಸೇತುವೆಗೆ ಹಾನಿಯಾಗಿರುವ ಬಗ್ಗೆಯೂ ವರದಿಯಾಗಿದೆ.

Also Read  ಜೇಸಿಐ ವಲಯ 15ರ ಮಧ್ಯಂತರ ಸಮ್ಮೇಳನ 'ರಂಗೋಲಿ - 2022' ➤ JFM ಕಾಶೀನಾಥ್ ಗೋಗಟೆ ನೇತೃತ್ವದ ಜೇಸಿಐ ಕಡಬ ಕದಂಬ ಘಟಕಕ್ಕೆ ಪ್ರಶಸ್ತಿಗಳ ಸುರಿಮಳೆ

error: Content is protected !!
Scroll to Top