ಉಪ್ಪಿನಂಗಡಿ: ಟಿಪ್ಪರ್ ಹಾಗೂ ಬೈಕ್ ನಡುವೆ ಢಿಕ್ಕಿ ➤‌ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 29. ಟಿಪ್ಪರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಪ್ಪೆಟ್ಟಿಯಲ್ಲಿ ಸೋಮವಾರದಂದು ನಡೆದಿದೆ.

ಮೃತ ಸವಾರನನ್ನು ಉಳಿ ಗ್ರಾಮದ ನಿವಾಸಿ ಸಫ್ವಾನ್ (20) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಟಿಪ್ಪರ್ ಮತ್ತು ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

Scroll to Top