ಸೆ. 04ರಂದು ಕಡಬ, ಪುತ್ತೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ಆ. 29. ಕಡಬ ಮತ್ತು ಪುತ್ತೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆ. 04ರಂದು ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ತಾಲೂಕು ಪಂಚಾಯತ್ ಪುತ್ತೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ನಗರ ಸಭೆ ಪುತ್ತೂರು, ತಾಲೂಕು ಯುವಜನ ಒಕ್ಕೂಟ (ರಿ) ಪುತ್ತೂರು, ವಿಷ್ಣು ಯುವ ಶಕ್ತಿ ಬಳಗ (ರಿ) ಮಜ್ಜಾರಡ್ಕ ಇದರ ಸಹಯೋಗದೊಂದಿಗೆ ಪುತ್ತೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ. 04 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ತಾಲ್ಲೂಕು ಪಂಚಾಯತ್ ಕಡಬ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ರಾಮಕುಂಜ, ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಫ್ರೌಡಶಾಲೆ ರಾಮಕುಂಜ, ತಾಲ್ಲೂಕು ಯುವಜನ ಒಕ್ಕೂಟ(ರಿ) ಕಡಬ ಇದರ ಸಹಯೋಗದೊಂದಿಗೆ ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.

Also Read  ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಇಸ್ಮಾಯಿಲ್ ಬಿ.ಎಸ್ ನೇಮಕ

ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ವಿಭಾಗದಲ್ಲಿ ನಡೆಯಲಿದ್ದು, ರಕ್ಷಣಾ ಪಡೆ, ಅರೆ ರಕ್ಷಣಾ ಪಡೆಗೆ ಸೇರಿದ ಕ್ರೀಡಾಪಟುಗಳಿಗೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ. ಒಬ್ಬ ಕ್ರೀಡಾಪಟು ಅಥವಾ ತಂಡ ಒಂದು ತಾಲೂಕಿನಲ್ಲಿ ಭಾಗವಹಿಸಿದ ನಂತರ ಬೇರೆ ತಾಲೂಕಿನಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ. ಒಬ್ಬ ಕ್ರೀಡಾಪಟು 3 ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಒಂದು ಟ್ರ್ಯಾಕ್ ಮತ್ತು ಎರಡು ಫೀಲ್ಡ್ ಅಥವಾ ಎರಡು ಟ್ರ್ಯಾಕ್ ಒಂದು ಫೀಲ್ಡ್. ಬೆಳಗ್ಗೆ 8.30ರ ಒಳಗೆ ತಂಡಗಳ ಇರುವಿಕೆ ಸ್ಪಷ್ಟಪಡಿಸತಕ್ಕದ್ದು 9.30ಕ್ಕೆ ಸರಿಯಾಗಿ Fixtures ಹಾಕಲಾಗುವುದು ನಂತರ ಬಂದ ತಂಡಗಳನ್ನು ಪರಿಗಣಿಸಲಾಗುವುದಿಲ್ಲ. ಪುರುಷರ ವಿಭಾಗದ 5000 ಮೀ. ಮತ್ತು ಮಹಿಳೆಯರ ವಿಭಾಗದ 3000 ಮೀ. ಸ್ಪರ್ಧೆಯನ್ನು ಬೆಳಗ್ಗೆ 9 ಗಂಟೆಗೆ ನಡೆಸಲಾಗುವುದು. ಪುಟ್ ಬಾಲ್ ಸ್ಪರ್ಧೆಯನ್ನು ಅದೇ ದಿನ ಫಿಲೋಮಿನಾ ಪದವಿ ಕಾಲೇಜಿನಲ್ಲಿ ನಡೆಸಲಾಗುವುದು. ಗುಂಪು ಸ್ಪರ್ಧೆಯಲ್ಲಿ ಭಾಗವಹಿಸುವವರು ಸೆ. 03ರ ಒಳಗೆ 9164502107 ವಾಟ್ಸಪ್ ನಂಬರ್‌ಗೆ ತಮ್ಮ ತಂಡದ ಹೆಸರನ್ನು ಕಳುಹಿಸಿಕೊಡಬೇಕೆಂದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೇಲ್ವಿಚಾರಕರಾದ ಶ್ರೀಕಾಂತ್ ಬಿರಾವು ಪ್ರಕಟಣೆ ನೀಡಿದ್ದಾರೆ.

ಪುರುಷರ ವಿಭಾಗದ ಸ್ಪರ್ಧೆಗಳು: 100ಮೀ, 200ಮೀ, 400ಮೀ, 800ಮೀ, 1500ಮೀ, 5000ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ತ್ರೋ, ಡಿಸ್ಕಸ್ ತ್ರೋ, 110ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ. ರಿಲೇ, ವಾಲಿಬಾಲ್, ತ್ರೋಬಾಲ್, ಪುಟ್ಬಾಲ್, ಖೋ ಖೋ, ಕಬಡ್ಡಿ,

Also Read  ಅಕ್ರಮವಾಗಿ 30 ಜಾನುವಾರುಗಳ ಸಾಗಾಟ ➤ ನಾಲ್ವರು ಆರೋಪಿಗಳು ವಶಕ್ಕೆ

ಮಹಿಳೆಯರ ವಿಭಾಗದ ಸ್ಪರ್ಧೆಗಳು: 100 ಮೀ, 200ಮೀ, 400ಮೀ, 1500ಮೀ, 3000 ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವೆಲಿನ್ ತ್ರೋ, ಡಿಸ್ಕಸ್ ತ್ರೋ, 100 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ, ವಾಲಿಬಾಲ್, ತ್ರೋಬಾಲ್, ಪುಟ್ಬಾಲ್, ಖೋ ಖೋ, ಕಬಡ್ಡಿ.

ನೇರ ಜಿಲ್ಲಾ ಮಟ್ಟದಲ್ಲಿ ನಡೆಯುವ ಸ್ಪರ್ಧೆಗಳು:- ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಬಾಸ್ಕೆಟ್‌ಬಾಲ್, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್ ಬಾಲ್, ಟೇಬಲ್ ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್, ನೆಟ್ ಬಾಲ್, ಈಜು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

 

error: Content is protected !!
Scroll to Top