(ನ್ಯೂಸ್ ಕಡಬ) newskadaba.com ಮಂಗಳೂರು, ನ.16. ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2017-18ನೇ ಸಾಲಿನಲ್ಲಿ ರಾಜ್ಯದಲ್ಲಿ ಅತ್ಯುತ್ತಮ ವ್ಯವಹಾರ ಮಾಡಿದ ಸಹಕಾರಿ ಸಂಘ ಪ್ರಶಸ್ತಿ ಲಭಿಸಿದೆ.
ಬುಧವಾರದಂದು ಮಂಗಳೂರಿನಲ್ಲಿ ನಡೆದ 64ನೇ ಅಖಿಲ ಭಾರತ ಸಹಕಾರ ಸಪ್ತಾಹ – 2017 ಕಾರ್ಯಕ್ರಮದಲ್ಲಿ ಸಚಿವ ಪ್ರಮೋದ್ ಮಧ್ವರಾಜ್ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸುಂದರ ಗೌಡ ಮಂಡೆಕರ, ಉಪಾಧ್ಯಕ್ಷರಾದ ರಮೇಶ್ ಭಟ್ ಕಲ್ಪುರೆ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಚಾಕೋ ಕೆ.ಎಂ., ನಿರ್ದೇಶಕರಾದ ಸೀತಾರಾಮ ಗೌಡ ಪೊಸವಳಿಕೆ, ರಘುಚಂದ್ರ ಕೊಣಾಜೆ, ಲೀಲಾವತಿ ಅಮ್ಮು ಶೆಟ್ಟಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
Also Read ಕೊರೋನಾ ಲಾಕ್‌ಡೌನ್ ಹಿನ್ನೆಲೆ ➤ ನಾಳೆಯಿಂದ ಕಡಬದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ನಡೆಸಲು ನಿರ್ಧಾರ