ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ➤ ಫೋಕ್ಸೋ ಕಾಯ್ದೆಯಡಿ ಮುರುಘಾ ಶ್ರೀ ಬಂಧನ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಸೆ. 01. ಅಪ್ರಾಪ್ತ ವಯಸ್ಸಿನ ಹಾಸ್ಟೆಲ್ ಹೆಣ್ಣು ಮಕ್ಕಳಿಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ಚಿತ್ರದುರ್ಗದ ಮುರುಘಾ ಶ್ರೀಯನ್ನು ಫೋಕ್ಸೋ ಕಾಯ್ದೆಯಡಿ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ.

ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್‌, ಮೊಳಕಾಲ್ಮೂರು ಠಾಣೆ ಸಿಪಿಐ ಸತೀಶ್ ಅವರು ಮಠದ ಒಳಗೆ ಪ್ರವೇಶಿಸಿ, ಪ್ರಕರಣ ದಾಖಲಾಗಿ 6 ದಿನಗಳ ನಂತರ ಬಂಧನದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ. ಸಂತ್ರಸ್ತ ಬಾಲಕಿಯರು ನ್ಯಾಯಾಧೀಶರ ಎದುರು ಹೇಳಿಕೆ ನೀಡಿದ್ದರು, ಇದರ ಬೆನ್ನಲ್ಲೇ ಶ್ರೀಗಳ ಬಂಧನಕ್ಕೆ ಸಿದ್ದತೆ ನಡೆಸಿದ್ದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ವಾಮೀಜಿ ಬಂಧನದ ಬೆನ್ನಲ್ಲೇ ಮಠದ ಸುತ್ತ ಬಿಗಿ ಭದ್ರತೆ ಒದಗಿಸಲಾಗಿದೆ.

Also Read  ಸಿಸಿಟಿವಿಯನ್ನು ಕಿತ್ತೆಸೆದು ಬ್ಯಾಂಕ್ ದರೋಡೆಗೆ ವಿಫಲಯತ್ನ...!!!

error: Content is protected !!
Scroll to Top