ಆಸಿಡ್ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತ್ಯು



(ನ್ಯೂಸ್ ಕಡಬ) newskadaba.com ಕಡಬ, ಸೆ. 03. ಆಸಿಡ್ ಸೇವಿಸಿ ಅಸ್ಪಸ್ಥಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಇಚ್ಲಂಪಾಡಿಯಿಂದ ವರದಿಯಾಗಿದೆ.







ಮೃತರನ್ನು ಇಚ್ಲಂಪಾಡಿಯ ಉರೇಜಾಲ್ ನಿವಾಸಿ ಫಿಲಿಪ್ ಟಿ.ಎಮ್(52) ಎಂದು ಗುರುತಿಸಲಾಗಿದೆ. ಇವರು ಆ. 28ರಂದು ತನ್ನ ಮನೆಯ ತೋಟದಲ್ಲಿ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top