ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಸುಳ್ಯ, ಪುತ್ತೂರು ತಾಲೂಕಿನ ಹಲವೆಡೆ ಎನ್ಐಎ ದಾಳಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ. 06. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಚುರುಕುಗೊಳಿಸಿದ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳ ತಂಡವು ಮಂಗಳವಾರದಂದು ಬೆಳ್ಳಂಬೆಳಗ್ಗೆ ಪುತ್ತೂರು, ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಮನೆ ಹಾಗೂ ಕೆಲ ಖಾಸಗಿ ಕಟ್ಟಡಗಳು ಸೇರಿದಂತೆ ಒಟ್ಟು 32 ಕಡೆಗಳಲ್ಲಿ ದಾಳೆ ನಡೆಸಿದ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಆರೋಪಿಗಳು ಮತ್ತು ಅವರಿಗೆ ಸಹಕರಿಸಿದವರ ವಿಚಾರಣೆ ನಡೆಯುತ್ತಿದ್ದು, ಎನ್​ಐಎ ಅಧಿಕಾರಿಗಳ ತಂಡಕ್ಕೆ ರಾಜ್ಯ ಪೊಲೀಸರು ಸಹಕಾರ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

Also Read  ಸುಳ್ಯದ ದಂಪತಿ ಮೈಸೂರಿನಲ್ಲಿ ಆತ್ಮಹತ್ಯೆ

error: Content is protected !!
Scroll to Top