(ನ್ಯೂಸ್ ಕಡಬ) newskadaba.com ಮಂಗಳೂರು, ನ.16. ಅಕ್ರಮವಾಗಿ ಅಪಾರ ಪ್ರಮಾಣದಲ್ಲಿ ಸಂಗ್ರಹಿಸಿಡಲಾಗಿದ್ದ ಅಕ್ರಮ ಮರಳನ್ನು ಗಣಿ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ನಗರದ ಹೊರವಲಯದ ಅದ್ಯಪಾಡಿ ಡ್ಯಾಮ್ ಬಳಿ ಗುರುವಾರದಂದು ನಡೆದಿದೆ.
ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿದ ಬಜ್ಪೆ ಪೊಲೀಸರು ಹಾಗೂ ಗಣಿ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿದ್ದ ಸುಮಾರು1300 ಲೋಡ್ ಮರಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳ ಪತ್ತೆಗಾಗಿ ಬಲೆ ಬೀಸಲಾಗಿದ್ದು, ಶೋಧ ಕಾರ್ಯ ಮುಂದುವರಿಸಿದ್ದಾರೆ.