ಮಂಗಳೂರು: ಮಹಿಳೆಯರ ಸರಗಳ್ಳತನ ಪ್ರಕರಣ ➤ ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ನಗರದ ವಿವಿಧ ಕಡೆಗಳಲ್ಲಿ ಮಹಿಳೆಯರ ಸರ ದೋಚುತ್ತಿದ್ದ 3 ಜನ ಆರೋಪಿಗಳನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಪಿಲಿಕುಲ ನಿಸರ್ಗಧಾಮ ನಗರದ ಜಗದೀಶ್(39), ಉರ್ವ ಸ್ಟೋರ್ ನಿವಾಸಿ ಸುಜಿತ್ ಶೆಟ್ಟಿ(40), ಮಂಗಳೂರಿನ ಪದವಿನಂಗಡಿ ನಿವಾಸಿ ಸುರೇಶ್ ರೈ(39) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 90 ಗ್ರಾಂ ತೂಕದ ಚಿನ್ನಾಭರಣ, 2 ಸ್ಕೂಟರ್ ಮತ್ತು 3 ಮೊಬೈಲ್ ಪೋನ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ ಸುಮಾರು 5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

Also Read  ರೆಪೋ ದರದಲ್ಲಿ ಯಥಾಸ್ಥಿತಿ- ಆರ್ ಬಿಐ ನಿರ್ಧಾರ

error: Content is protected !!
Scroll to Top