(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 06. ಅರಣ್ಯ ಹಾಗೂ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿಗೆ ಮಂಗಳವಾರದಂದು ರಾತ್ರಿ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ಕುಟುಂಬಸ್ಥರು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ರಾತ್ರಿ 10ಗಂಟೆಯ ವೇಳೆಗೆ ಹೃದಯಾಘಾತವಾಗಿದೆ ಎಂದೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ
