ಸಚಿವ ಉಮೇಶ್ ಕತ್ತಿ ನಿಧನ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 06. ಅರಣ್ಯ ಹಾಗೂ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿಗೆ ಮಂಗಳವಾರದಂದು ರಾತ್ರಿ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ಕುಟುಂಬಸ್ಥರು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ರಾತ್ರಿ 10 ಗಂಟೆಯ ವೇಳೆಗೆ ಹೃದಯಾಘಾತವಾಗಿದೆ ಎಂದೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

error: Content is protected !!
Scroll to Top