ಪ್ರವೀಣ್ ಹತ್ಯೆ ಪ್ರಕರಣ- ಎನ್ಐಎ ದಾಳಿ ➤ ಮದ್ದುಗುಂಡು, ಸುಧಾರಿತ ಶಸ್ತ್ರಾಸ್ತ್ರಗಳು ಪತ್ತೆ.

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 07. ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ತಂಡವು ಕರ್ನಾಟಕದ ಮೈಸೂರು, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪುತ್ತೂರು, ಸುಳ್ಯ ಸೇರಿದಂತೆ 33 ಸ್ಥಳಗಳಿಗೆ ಏಕಕಾಲದಲ್ಲಿ ದಿಢೀರ್ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ.

ಪ್ರವೀಣ್‌ ಹತ್ಯಾ ಆರೋಪಿಗಳ ವಿಚಾರಣೆಯ ಸಂದರ್ಭದಲ್ಲಿ ಎನ್ಐಎ ತಂಡಕ್ಕೆ ದೊರೆತ ಮಾಹಿತಿಯನುಸಾರ ಹತ್ಯೆ ಪ್ರಕರಣಕ್ಕೆ ಸಹಕರಿಸಿದ ಹಾಗೂ ಆರೋಪಿಗಳ ರಕ್ಷಣೆಗೆ ನೆರವಾಗುತ್ತಿರುವವರ ಮಾಹಿತಿ ಕಲೆ ಹಾಕಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಸಕ್ರಿಯ ಸದಸ್ಯರಾಗಿರುವ ಆರೋಪಿಗಳು ಸಮಾಜದ ಒಂದು ವರ್ಗದ ಸದಸ್ಯರಲ್ಲಿ ಭಯ ಉಂಟುಮಾಡುವ ನಿಟ್ಟಿನಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಯೋಜಿಸಿದ್ದಾರೆ ಮತ್ತು ಮಾಡಿದ್ದಾರೆ ಎಂದು ಎನ್ಐಎ ತನಿಖಾ ತಂಡ ತಿಳಿಸಿದೆ‌. ಆರೋಪಿಗಳು ಮತ್ತು ಶಂಕಿತರ ಆವರಣದಲ್ಲಿ ಸೆ. 06 ರಂದು ನಡೆಸಿದ ಶೋಧಗಳಲ್ಲಿ, ಡಿಜಿಟಲ್ ಸಾಧನಗಳು, ಬಳಸಿದ ಮದ್ದುಗುಂಡುಗಳು, ಸುಧಾರಿತ ಶಸ್ತ್ರಾಸ್ತ್ರಗಳು, ನಗದು, ದೋಷಾರೋಪಣೆ ದಾಖಲೆಗಳು, ಕರಪತ್ರಗಳು ಹಾಗೂ ಸಾಹಿತ್ಯವನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಪ್ರಕರಣದಲ್ಲಿ ಹೆಚ್ಚಿನ ತನಿಖೆಗಳು ಪ್ರಗತಿಯಲ್ಲಿದೆ ಎಂದು ತಿಳಿದು ಬಂದಿದೆ.

Also Read  ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ ► ತಗಡಿನ ಮನೆ ಜಖಂ

error: Content is protected !!
Scroll to Top