ಸುಳ್ಯ: ಮನೆಗೆ ಬೆಂಕಿಬಿದ್ದು ಯಜಮಾನ ಜೀವಂತ ದಹನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ. 07. ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನವಾದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.

ಮೃತರನ್ನು ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಪರ್ಲಿಕಜೆ ಸುಧಾಕರ (47) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಸುಧಾಕರ್ ಅವರು ಮನೆಯಲ್ಲಿ ಮಲಗಿದ್ದು, ಪತ್ನಿ ಟ್ಯಾಪಿಂಗ್‌ಗೆಂದು ಹೋಗಿದ್ದರು. ಮಗಳು ಶಾಲೆಗೆ ತೆರಳಿದ್ದಳು. ಈ ಹೊತ್ತಿನಲ್ಲಿ ಬೆಂಕಿ ಮನೆಯ ಒಂದು ಪಾರ್ಶ್ವವನ್ನು ಸುಟ್ಟು ಹಾಕಿದೆ. ಸುಧಾಕರರು ಅಸೌಖ್ಯಕ್ಕೀಡಾಗಿರುವ ಹಿನ್ನಲೆ ಅವರಿಗೆ ಹೊರಗೆ ಓಡಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳದವರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ‘ಆಧುನಿಕ ಭಾರತದಲ್ಲಿ ಗಾಂಧೀಜಿಯ ಪರಂಪರೆ’➤ಫೋಟೋಗ್ರಾಫಿ ಸ್ಪರ್ಧೆ

error: Content is protected !!
Scroll to Top