ಪತಿ- ಪತ್ನಿಯ ನಡುವೆ ಜಗಳ ಕೊಲೆಯಲ್ಲಿ ಅಂತ್ಯ ➤ ಪತ್ನಿಯ ಕತ್ತು ಕೊಯ್ದ ಪತಿರಾಯ- ಪತ್ನಿ ಮೃತ್ಯು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಸೆ. 07. ದಂಪತಿಗಳಿಬ್ಬರ ನಡುವೆ ಜಗಳ ನಡೆದು, ತಾರಕಕ್ಕೇರಿ ಬಳಿಕ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಇಲ್ಲಿನ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪ್ರಿಯಾಂಕಾ ಲೇಜೌಟ್ ನಲ್ಲಿ ನಡೆದಿದೆ.

ಕೊಲೆಗೀಡಾದವರನ್ನು ಮಂಜುಳಾ ಎಂದು ಗುರುತಿಸಲಾಗಿದೆ. ಪತಿ ದಿನೇಶ್ ಕೊಲೆ ಆರೋಪಿ. ಮೆಸ್ಕಾಂ ಉದ್ಯೋಗಿಯಾಗಿರುವ ದಿನೇಶ್ ತನ್ನ ಪತ್ನಿ ಮಂಜುಳಾರವರ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ್ದಲ್ಲದೇ, ತಾನೂ ಕೂಡ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ. ಮಂಜುಳಾ ಅಡುಗೆಮನೆಯಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ಮಂಜುಳಾ ಮತ್ತಿಘಟ್ಟ ನಿವಾಸಿಯಾಗಿದ್ದು ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಇವರಿಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ತುಂಗಾ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಸ್ಪಷ್ಟ ಕಾರಣ ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ.

Also Read  ಬೆಳ್ತಂಗಡಿ: ಜೀವನದಲ್ಲಿ ಜಿಗುಪ್ಸೆ ಹೊಂದಿ ವ್ಯಕ್ತಿ ಆತ್ಮಹತ್ಯೆ

error: Content is protected !!
Scroll to Top