ನಿರ್ಮಾಣ ಹಂತದ ಕಟ್ಟಡ ಕುಸಿತ ➤ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 09. ನಿರ್ಮಾಣ ಹಂತದಲ್ಲಿದ್ದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಮೂವರು ಮೃತಪಟ್ಟ ಘಟನೆ ಆಜಾದ್ ಮಾರ್ಕೆಟ್ ಪ್ರದೇಶದಲ್ಲಿ ಶುಕ್ರವಾರದಂದು ನಡೆದಿದೆ.


ಕಟ್ಟಡದಲ್ಲಿ ಕೆಲಸ ನಡೆಯುತ್ತಿದ್ದ ವೇಳೆ ಬೆಳಗ್ಗೆ ಸುಮಾರು 8.50ರ ಹೊತ್ತಿಗೆ ಕಟ್ಟಡ ಕುಸಿದು ಬಿದ್ದಿದ್ದು, ಇದರಿಂದ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕನಿಷ್ಠ ಐವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Also Read  ಪುತ್ತೂರು: ಬಸ್ ನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ ➤ ಆರೋಪಿ ಅರೆಸ್ಟ್

error: Content is protected !!
Scroll to Top