ಆಟೋ ರಿಕ್ಷಾ – ಟೆಂಪೋ ಟ್ರಾವೆಲ್ಲರ್ ನಡುವೆ ಅಪಘಾತ ➤‌ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಮಾಣಿ, ಸೆ.10. ಆಟೋ ರಿಕ್ಷಾ ಹಾಗೂ ಟೆಂಪೋ ಟ್ರಾವೆಲ್ಲರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಶನಿವಾರ ಬೆಳಗಿನ ಜಾವ ನಡೆದಿದೆ.

ಉಪ್ಪಿನಂಗಡಿ ಕಡೆಯಿಂದ ಮಾಣಿ ಕಡೆಗೆ ತೆರಳುತ್ತಿದ್ದ ಅಟೋ ರಿಕ್ಷಾ ಹಾಗೂ ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ನಡುವೆ ಬುಡೋಳಿ ವಿಸ್ಡಂ ಶಾಲೆಯ ಸಮೀಪ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ರಿಕ್ಷಾದಲ್ಲಿದ್ದ ಮಂಜೇಶ್ವರ ಮೂಲದ ಮೂವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಅಪಘಾತ ನಡೆದ ತಕ್ಷಣವೇ ಮಾಣಿಯ ಸೋಷಿಯಲ್ ಇಕ್ವ ಆಂಬ್ಯುಲೆನ್ಸ್ ನಲ್ಲಿ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Also Read  ಉಳ್ಳಾಲ: ವೀರ ರಾಣಿ ಅಬ್ಬಕ್ಕನ ಥೀಮ್ ಪಾರ್ಕ್ ನಿರ್ಮಾಣವಾಗಬೇಕು ➤ ಶೋಭಾ ಕರಂದ್ಲಾಜೆ

 

error: Content is protected !!