ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಎರಡೂ ಕಿಡ್ನಿ ಕದ್ದ ವೈದ್ಯರು

(ನ್ಯೂಸ್ ಕಡಬ) newskadaba.com ಪಾಟ್ನಾ, ಸೆ. 12. ಹೊಟ್ಟೆನೋವಿನ ಚಿಕಿತ್ಸೆಗಾಗಿ ಖಾಸಗಿ ಕ್ಲಿನಿಕ್‌ಗೆ ದಾಖಲಾಗಿದ್ದ ಮಹಿಳೆಯ ಶಸ್ತ್ರಚಿಕಿತ್ಸೆ ಮಾಡುವ ನೆಪದಲ್ಲಿ ಎರಡೂ ಕಿಡ್ನಿಗಳನ್ನು ವೈದ್ಯರು ಕದ್ದಿರುವ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಮಹಿಳೆಯು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಆರೋಗ್ಯ ತೀವ್ರವಾಗಿ ಕ್ಷೀಣಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ ದಾಖಲಿಸಿದಾಗ ಅಲ್ಲಿ ಪರೀಕ್ಷಿಸಿದ ವೈದ್ಯರು ಮಹಿಳೆಯ ಎರಡೂ ಕಿಡ್ನಿಗಳನ್ನು ತೆಗೆದಿರುವುದು ಬೆಳಕಿಗೆ ಬಂದಿದೆ. ಇನ್ನು ಈ ಮಹಿಳೆಯ ಕುಟುಂಬಸ್ಥರ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಬರಿಯಾರ್‌ಪುರ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

Scroll to Top