ಹಾಲಿನ ದರ 3 ರೂ. ಹೆಚ್ಚಿಸಲು ಕೆಎಂಎಫ್ ನಿರ್ಧಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12. ಬೆಲೆಯೇರಿಕೆಯಿಂದ ಈಗಾಗಲೇ ಜನ ರೋಸಿ ಹೋಗಿದ್ದು, ಇದರ ನಡುವೆಯೇ ನಂದಿನ ಹಾಲಿನ ದರವನ್ನು 3 ರೂ.ಗೆ ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ.


ಈಗಾಗಲೇ ಹಾಲಿನ ದರ ಹೆಚ್ಚಳ ಮಾಡುವಂತೆ ಕಳೆದ 8 ತಿಂಗಳಿಂದ ಕೆಎಂಎಫ್ ಸರ್ಕಾರಕ್ಕೆ ಮನವಿ ಮಾಡಿತ್ತಾದರೂ, ರಾಜ್ಯ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದೀಗ ರೈತರು ಹಾಗೂ ಕೆಎಂಎಫ್‍ನ ಜಿಲ್ಲಾ ಹಾಲು ಒಕ್ಕೂಟಗಳಿಂದ ಹಾಲಿನ ದರ ಹೆಚ್ಚಳಕ್ಕೆ ಒತ್ತಡ ಹೆಚ್ಚಾಗಿದೆ. ಹೀಗಾಗಿ ಕೆಎಂಎಫ್ ತನಗೆ ಇರುವ ಅಧಿಕಾರವನ್ನು ಬಳಸಿಕೊಂಡು ತಾನೇ ಹಾಲಿನ ದರವನ್ನು ಏರಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ನಗರದ ಖಾಸಗಿ ಹೋಟೆಲ್‍ನಲ್ಲಿ ಶುಕ್ರವಾರ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ನಡೆದ ಕೆಎಂಎಫ್ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದ್ದು, ಕೆಎಂಎಫ್‍ನ ಎಲ್ಲಾ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದಕ್ಕೆ ಬೆಂಬಲ ನೀಡಿವೆ. ನಂದಿನಿ ಹಾಲಿನ ದರವನ್ನು ಮೂರು ರೂಪಾಯಿ ಹೆಚ್ಚಳ ಮಾಡಲಿದ್ದು, ಇದನ್ನು ಹಾಲು ಉತ್ಪಾದಕ ರೈತರಿಗೆ ವರ್ಗಾಯಿಸಲಾಗುವುದು ಎಂದು ಹೇಳಲಾಗಿದೆ.

Also Read  ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಮೃತ್ಯು, ಹಲವರು ಅಸ್ವಸ್ಥ..!!

error: Content is protected !!
Scroll to Top