ದ.ಕ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಮೊಬೈಲ್ ನಂಬರ್ ಹ್ಯಾಕ್ ➤‌ ಮೋಸ ಹೋಗದಂತೆ ಡಿಸಿ ಮನವಿ

(ನ್ಯೂಸ್ ಕಡಬ) newskadaba com ಮಂಗಳೂರು, ಸೆ. 14. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು, 8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು. ಆದ ಕಾರಣ ಯಾರೂ ಕೂಡ ಯಾವುದೇ ರೀತಿಯಲ್ಲಿ ಸಹಾಯ ಅಥವಾ ಹಣವನ್ನು ಆ ನಂಬರ್ ಗೆ ವರ್ಗಾಯಿಸದಂತೆ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಮನವಿ ಮಾಡಿದ್ದಾರೆ. 8590710748 ಈ ನಂಬರ್ ನಿಂದ ಯಾವುದೇ ರೀತಿಯ ಮನವಿ ಬಂದಲ್ಲಿ ಅದನ್ನು ಬ್ಲಾಕ್ ಮಾಡಿ ವರದಿ ಮಾಡುವಂತೆಯೂ ಜಿಲ್ಲಾಧಿಕಾರಿಯವರು ಕೋರಿದ್ದಾರೆ.

Also Read  ಮತ್ತೆ ಮುಳುಗಡೆಗೊಂಡ ಹೊಸ್ಮಠ ಸೇತುವೆ

error: Content is protected !!
Scroll to Top