ಮಂಗಳೂರು: ಪಿಯು ವಿದ್ಯಾರ್ಥಿಗೆ ಚೂರಿ ಇರಿತ ➤‌ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಇಲ್ಲಿನ ನಂತೂರು ಜಂಕ್ಷನ್‌ ಬಳಿ ಪ.ಪೂ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗೆ ಮತ್ತೊಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಚೂರಿ ಇರಿದು ಗಂಭೀರ ಗಾಯಗೊಳಿಸಿದ ಘಟನೆ ನಡೆದಿದೆ.

ಪಿಯುಸಿ ವಿದ್ಯಾರ್ಥಿಯೊಬ್ಬ ಕಾಲೇಜು ಬಿಟ್ಟು ತನ್ನ ಗೆಳೆಯರೊಂದಿಗೆ ನಂತೂರು ಜಂಕ್ಷನ್‌ ಕಡೆಗೆ ನಡೆದುಕೊಡು ಹೋಗುತ್ತಿದ್ದ ವೇಳೆ ಮತ್ತೊಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಬಂದು ಮಾತನಾಡಲು ಇದೆ ಎಂದು ಹೇಳಿ ದೈವಸ್ಥಾನದ ಹಿಂಭಾಗಕ್ಕೆ ಕರೆದುಕೊಂಡು ಹೋಗಿ ಅವರಲ್ಲಿದ್ದ ಚೂರಿಯಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚೂರಿ ಇರಿತಕ್ಕೊಳಗಾದ ವಿದ್ಯಾರ್ಥಿಯು ಮತ್ತೊಂದು ಕಾಲೇಜಿನಲ್ಲಿರುವ ತನ್ನ ಗೆಳೆಯನಿಗೆ ಅಲ್ಲಿನ ಮೂವರು ವಿದ್ಯಾರ್ಥಿಗಳು ಬೆದರಿಕೆ ಹಾಕಿರುವ ಕುರಿತು ಗೆಳೆಯರೊಂದಿಗೆ ಹೋಗಿ ಸಮಾಧಾನ ಮಾಡಿ ಬಂದಿದ್ದು, ಇದರಿಂದ ಕೋಪಗೊಂಡ ಇಬ್ಬರು ವಿದ್ಯಾರ್ಥಿಗಳು ಕೊಲೆ ಮಾಡುವ ಉದ್ದೇಶದಿಂದ ಚೂರಿಯಿಂದ ಇರಿದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಇದು ನನ್ನ ಕೊನೆಯ ಚುನಾವಣೆ ➤ ಜಗದೀಶ್ ಶೆಟ್ಟರ್ ಘೋಷಣೆ

error: Content is protected !!
Scroll to Top