ಬೈಕ್ ಹಾಗೂ ಪಿಕಪ್ ವಾಹನದ ನಡುವೆ ಢಿಕ್ಕಿ ➤‌ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 24. ಬೈಕ್ ಹಾಗೂ ಪಿಕಪ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೇಪು ಎಂಬಲ್ಲಿ ವರದಿಯಾಗಿದೆ.


ಮೃತರನ್ನು ಬದಿಯಡ್ಕ ನಿವಾಸಿ ಸಂದೇಶ್ (33) ಎಂದು ಗುರುತಿಸಲಾಗಿದೆ. ಬಿಜೆಪಿ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ಇವರು ಸೆ. 23ರಂದು ಸಂಜೆ ವೇಳೆ ವಿಟ್ಲದಿಂದ ಬದಿಯಡ್ಕದ ಕಡೆಗೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪರಿಣಾಮ ಗಂಭೀರ ಗಾಯಗೊಂಡಿದ್ದ ಇವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದರಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Scroll to Top