ಬೆಳ್ತಂಗಡಿ: ಸಾಲ ಬಾಧೆ- ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 24. ಸಾಲ ತೀರಿಸಲಾಗದೇ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದಲ್ಲಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನೆರಿಯ ಗ್ರಾಮದ ಚಂದ್ರಶೇಖರ್ (24) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಗಾರೆ ಮತ್ತು ವೈರಿಂಗ್ ಕೆಲಸ ಮಾಡುತ್ತಿದ್ದ ಚಂದ್ರಶೇಖರ್, ತನ್ನ ಗೆಳೆಯರ ಜೊತೆ ಸೇರಿ ಶಬರಿ ಎಂಬ ಸ್ವಸಹಾಯ ಸಂಘ ಮಾಡಿದ್ದು, ಈ ಸಂಘದ ಮೂಲಕ ಉಜಿರೆಯ ಖಾಸಗಿ ಬ್ಯಾಂಕಿನಿಂದ 4 ಲಕ್ಷ ರೂ. ಸಾಲ ಪಡೆದು, ಈ ಹಣವನ್ನು ಎಂಟು ಜನ ಹಂಚಿಕೊಂಡಿದ್ದಾರೆ. ಆದರೆ ಚಂದ್ರಶೇಖರ್ ತೆಗೆದ ಸಾಲದ ಹಣವನ್ನು ಅನಿವಾರ್ಯ ಇದೆ ಎಂದು ಹೇಳಿ ಗೆಳೆಯ ಯೋಗೀಶ್ ಎಂಬಾತ ಪಡೆದುಕೊಂಡಿದ್ದು, ಆತ ಸಾಲ ಕಟ್ಟದ ಹಿನ್ನೆಲೆ ಬ್ಯಾಂಕ್ ಸಿಬ್ಬಂದಿ ಪದೇ ಪದೇ ಚಂದ್ರಶೇಖರ್ ಗೆ ಕರೆ ಮಾಡುತ್ತಿದ್ದರು. ಇದರಿಂದ ಬೇಸತ್ತ ಚಂದ್ರಶೇಖರ್ ಕಳೆದ ವಾರ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣವೇ ಆತನನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

Also Read  SSF ದ.ಕ ಜಿಲ್ಲಾ ಬ್ಲಡ್ ಸೈಬೋ ಇದರ ವತಿಯಿಂದ ನಾಳೆ ಬೃಹತ್ ರಕ್ತದಾನ ಶಿಬಿರ

error: Content is protected !!
Scroll to Top