ಮಂಗಳೂರು: ಹಾಸ್ಟೆಲ್ ಕಿಟಕಿ ಮುರಿದು ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಖಾಸಗಿ ಕಾಲೇಜಿನ ಹಾಸ್ಟೆಲ್ ಕಿಟಕಿ ಮುರಿದು ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ.


ಈ ಮೂವರು ವಿದ್ಯಾರ್ಥಿನಿಯರು ಮಂಗಳೂರು ರೈಲು ನಿಲ್ದಾಣದ ಮೂಲಕ ಕೊಯಂಬತ್ತೂರಿಗೆ ಪ್ರಯಾಣಿಸಿರುವ ಬಗ್ಗೆ ಮಾಹಿತಿ ಪಡೆದ ಮಂಗಳೂರು ಪೊಲೀಸರು, ಚೆನ್ನೈ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ ಚೆನ್ನೈನಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಈ ಮೂವರು ವಿದ್ಯಾರ್ಥಿನಿಯರನ್ನು ವಿಚಾರಣೆ ನಡೆಸಿ ಮಂಗಳೂರಿಗೆ ಕರೆತರಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬುಧವಾರ ಮುಂಜಾನೆ ಸುಮಾರು 3.30 ಕ್ಕೆ ಬೆಂಗಳೂರಿನ ಇಬ್ಬರು ಹಾಗೂ ಚಿಕ್ಕಮಗಳೂರಿನ ಓರ್ವ ವಿದ್ಯಾರ್ಥಿನಿ ಹಾಸ್ಟೆಲ್ ನ ಕಿಟಕಿ ಮುರಿದು ಹೊರಬಂದು ನಾಪತ್ತೆಯಾಗಿದ್ದರು.

Also Read  ಮಂಗಳೂರು: ಕೊರೋನಾ ಸೋಂಕಿತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಬರೆಯಲು ಅವಕಾಶ

error: Content is protected !!
Scroll to Top