ಇನ್ಮುಂದೆ ಬ್ಯಾಂಕ್ ಗಳು ರೈತರ ಆಸ್ತಿ ಜಪ್ತಿ ಮಾಡುವಂತಿಲ್ಲ ➤‌ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಸೆ. 24. ಸಾಲಕ್ಕಾಗಿ ಹಣಕಾಸು ಸಂಸ್ಥೆಗಳು ಮತ್ತು ಬ್ಯಾಂಕ್ ಗಳು ರೈತರ ಮನೆ, ಆಸ್ತಿ- ಪಾಸ್ತಿ ಮೊದಲಾದವುಗಳ ಜಪ್ತಿ ಮಾಡುವುದನ್ನು ನಿಷೇಧ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಸಿರಿಗೆರೆ ತರಳಬಾಳು ಬೃಹನ್ಮಠದಲ್ಲಿ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಶ್ರೀಗಳ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದು, ಇಂತಹ ಸಂದರ್ಭದಲ್ಲಿ ಬ್ಯಾಂಕ್, ಫೈನಾನ್ಸ್ ಗಳು ಆಸ್ತಿ ಜಪ್ತಿ ಮಾಡುವುದು ಸರಿಯಲ್ಲ. ಈ‌ ಕುರಿತು ಬೆಂಗಳೂರಿಗೆ ಹೋದ ತಕ್ಷಣವೇ ಅಗತ್ಯ ಕಾನೂನು ತಿದ್ದುಪಡಿ ತಂದು ಜಪ್ತಿಯನ್ನು ನಿಷೇಧ ಮಾಡುತ್ತೇನೆ ಎಂದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಸಾಲಕ್ಕಾಗಿ ರೈತರ ಜಮೀನು ಜಪ್ತಿ, ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ನೀಡುವುದಿಲ್ಲ. ರೈತರ ಪರವಾಗಿ ಸರ್ಕಾರ ನಿಲ್ಲುತ್ತದೆ. ರೈತರು ಈ ಬಗ್ಗೆ ಚಿಂತೆ ಮಾಡುವುದು ಬೇಡ. ನಿಮ್ಮ ಜೊತೆಗೆ ನಾವಿದ್ದೇವೆ ಎಂದು ತಿಳಿಸಿದರು.

Also Read  ಕುಂದುಕೊರತೆಗಳ ಬಗ್ಗೆ ದೂರು ಸಲ್ಲಿಸಲು ಬಯಸುತ್ತೀರಾ..? ➤ ನೇರವಾಗಿ ಸಿಎಂ ಕಛೇರಿಗೆ ದೂರು ಸಲ್ಲಿಸಲು ಹೊಸ ಟ್ವಿಟರ್ ಖಾತೆ ಆರಂಭ

error: Content is protected !!
Scroll to Top