ನೆಲ್ಯಾಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಅಪಘಾತ ➤‌ ಮಹಿಳೆ ಸೇರಿದಂತೆ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.25. ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ವಿಫ್ಟ್ ಡಿಸೈರ್ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್, ಹಾಸನದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

 

error: Content is protected !!

Join the Group

Join WhatsApp Group