ಪರೀಕ್ಷೆಯಲ್ಲಿ ತಪ್ಪಾಗಿ ಬರೆದ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಶಿಕ್ಷಕ

(ನ್ಯೂಸ್ ಕಡಬ) newskadaba.com ಲಕ್ನೋ, ಸೆ 27. ದಲಿತ ವಿದ್ಯಾರ್ಥಿಯೋರ್ವ ಪರೀಕ್ಷೆಯಲ್ಲಿ ತಪ್ಪಾಗಿ ಬರೆದಿದ್ದಾನೆ ಎಂದು ಕೋಪಗೊಂಡ ಶಿಕ್ಷಕನೋರ್ವ ವಿದ್ಯಾರ್ಥಿಯನ್ನು ಹಿಗ್ಗಾಮುಗ್ಗ ಥಳಿಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬಾಲಕ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಔರೈಯ ಜಿಲ್ಲೆಯ ಶಾಲೆಯಲ್ಲಿ ನಡೆದಿದೆ.


ಮೃತಪಟ್ಟ ವಿದ್ಯಾರ್ಥಿಯನ್ನು ನಿಖಿತ್‌ ಕುಮಾರ್‌ ಎಂದು ಗುರುತಿಸಲಾಗಿದೆ. ಶಾಲೆಯ ಶಿಕ್ಷಕನನ್ನು ಅಶ್ವಿನಿ ಸಿಂಗ್ ಎನ್ನಲಾಗಿದೆ. ನಿಖಿತ್ ಕುಮಾರ್ ಸಮಾಜ ವಿಜ್ಞಾನ ಪರೀಕ್ಷೆಯ ಉತ್ತರ ಪತ್ರಿಕೆಯಲ್ಲಿ ಕಾಗುಣಿತ ದೋಷ ಮಾಡಿದ್ದಾನೆ ಎಂಬ ಕಾರಣಕ್ಕೆ ಶಿಕ್ಷಕ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ್ದು, ಇದರಿಂದ ಗಂಭೀರ ಗಾಯಗೊಂಡ ವಿದ್ಯಾರ್ಥಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಬಾಲಕನ ಪೋಷಕರು ಹಾಗೂ ಸಾರ್ವಜನಿಕರು ಶಿಕ್ಷಕನನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಘಟನೆ ನಡೆದ ಬೆನ್ನಲ್ಲೇ ಶಿಕ್ಷಕ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

Also Read  ಜಮ್ಮು ಕಾಶ್ಮೀರ: ಯೋಧರೋರ್ವರು ಸರ್ವಿಸ್ ರೈಫಲ್ ನಿಂದ ಗುಂಡು ಹಾರಿಸಿ ಆತ್ಮಹತ್ಯೆ

error: Content is protected !!
Scroll to Top