ಮಂಗಳೂರು, ಉಡುಪಿಯ ಹಲವೆಡೆ ಪೊಲೀಸ್ ದಾಳಿ ➤‌ ಹಲವು ಪಿಎಫ್ಐ ನಾಯಕರು ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 27. ನಗರ ಹಾಗೂ ಗ್ರಾಮಾಂತರ ಪ್ರದೇಶದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಹಲವು ಮಂದಿ ನಾಯಕರನ್ನು ಪೊಲೀಸರು ಸೋಮವಾರ ತಡರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.


ಉಳ್ಳಾಲ, ತಲಪಾಡಿ, ಮಂಗಳೂರು ಹಾಗೂ ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯ ಕೆಲವು ಪ್ರದೇಶದ ಮನೆಗಳಿಂದ ಹಲವು ಮಂದಿ ಪಿಎಫ್‌ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಮಂದಿಯನ್ನು ಸೆಕ್ಷನ್ 107, 157 ಕಾಯ್ದೆಯಡಿ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

Also Read  ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಎಸ್‌ಐ..!

ಉಡುಪಿ ಜಿಲ್ಲೆಯಲ್ಲೂ PFI ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೂಡೆ, ಗಂಗೊಳ್ಳಿ ಸೇರಿದಂತೆ ಉಡುಪಿ ಜಿಲ್ಲೆಯ ಒಟ್ಟು ನಾಲ್ಕು ಕಡೆ ದಾಳಿ ನಡೆಸಿದ ಪೊಲೀಸರು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!
Scroll to Top