ಕಡಬ: ಕ್ರೈಸ್ತ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 27. ಸಹಕಾರಿ ತತ್ವವನ್ನು ಪಾಲಿಸುವ ಮೂಲಕ ಪ್ರತಿಯೊಬ್ಬ ವ್ಯಕ್ತಿಯೂ ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆರ್ಥಿಕ ಸ್ವಾವಲಂಬನೆ ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಪುತ್ತೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ ವಂ| ಬಿಷಪ್ ಗೀವರ್ಗಿಸ್ ಮಾರ್ ಮಕ್ಕಾರಿಯೋಸ್ ನುಡಿದರು.


ಅವರು ಕ್ರೈಸ್ತ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘದ ಕಡಬ ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಎಲ್ಲರೂ ಬೆಳೆಯಬೇಕೆಂಬ ಶುದ್ಧ ಮನಸ್ಸಿನಿಂದ ನಾವು ಕಾರ್ಯೋನ್ಮುಖರಾದರೆ ನಾವೂ ಬೆಳೆಯಬಹುದು. ನಮ್ಮ ಜೊತೆಗಿರುವವರೂ ಬೆಳೆಯಬಹುದು. ಆದುದರಿಂದ ಸಂಸ್ಥೆಯ ಬೆಳವಣಿಗೆಯಲ್ಲಿ ಕೈಜೋಡಿಸುವ ಮೂಲಕ ಊರಿನ ಅಭಿವೃದ್ಧಿಗೆ ಕಾರಣರಾಗೋಣ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕುಟ್ರುಪಾಡಿ ಸೈಂಟ್ ಮೇರಿಸ್ ಫೋರನ್ ಚರ್ಚ್‌ನ ಧರ್ಮಗುರು ವಂ|ಜೋಸ್ ಆಯಂಕುಡಿ, ಪುತ್ತೂರಿನ ಮಾಯಿದೆ ದೇವುಸ್ ಚರ್ಚ್‌ನ ವಿಕಾರ್‌ವಾರ್ ವಂ| ಲಾರೆನ್ಸ್ ಮಸ್ಕರೇನಸ್ , ಕಡಬದ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಂಚಾಲಕ ವಂ| ಅರುಣ್ ವಿಲ್ಸನ್ ಲೋಬೊ, ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆ, ಧರ್ಮಗುರು ವಂ| ಪಿ.ಕೆ.ಅಬ್ರಹಾಂ ಕೋರ್ ಎಪಿಸ್ಕೋ, ಜಿ.ಪಂ. ಮಾಜಿ ಸದಸ್ಯ ಪಿ.ಪಿ.ವರ್ಗೀಸ್ ಹಾಗೂ ಕಡಬ ಗ್ರಾ.ಪಂ. ಮಾಜಿ ಅಧ್ಯಕ್ಷ ಅಶ್ರಫ್ ಶೇಡಿಗುಂಡಿ, ಸಂಘದ ಆಡಳಿತ ಮಂಡಳಿ ಉಪಾಧ್ಯಕ್ಷ ಜಾನ್ ವಿಲಿಯಂ ಲಸ್ರಾದೋ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಿತ್ ಪಿ.ಜಿ. ಮೊದಲಾದವರು ಉಪಸ್ಥಿತರಿದ್ದರು.

Also Read  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಆಯುಷ್ ಔಷಧ ವಿತರಣೆ

error: Content is protected !!
Scroll to Top