ಸುಳ್ಯ: ಕಾರು ಮತ್ತು ಸ್ಕೂಟಿ ನಡುವೆ ಢಿಕ್ಕಿ ➤‌ ಅಣ್ಣ, ತಂಗಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಅ. 04. ಸ್ಕೂಟಿ ಮತ್ತು ಕಾರು ನಡುವೆ ಪರಸ್ಪರ ಡಿಕ್ಕಿಯಾಗಿ ಸ್ಕೂಟಿಯಲ್ಲಿದ್ದ ಅಣ್ಣ ಮತ್ತು ತಂಗಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಎಲಿಮಲೆ ಸಮೀಪದ ಸುಬ್ರಹ್ಮಣ್ಯ – ಜಾಲ್ಸೂರು ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರದಂದು ಸಂಭವಿಸಿದೆ.

ಮೃತಪಟ್ಟವರನ್ನು ನಿಶಾಂತ್ ಹಾಗೂ ಆತನ ಸಹೋದರಿ ಮೋಕ್ಷಾ ಎಂದು ಗುರುತಿಸಲಾಗಿದೆ. ಸ್ಕೂಟಿ ಮತ್ತು ಮಾರುತಿ ಕಾರು ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ನಿಶಾಂತ್ ಹಾಗೂ ಮೋಕ್ಷಾ ಅವರನ್ನು ಸ್ಥಳೀಯರು ಸೇರಿ ತಕ್ಷಣವೇ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದು, ಆದರೆ ಮಾರ್ಗ ಮಧ್ಯೆ ನಿಶಾಂತ್ ಮೃತಪಟ್ಟರೆ, ತಂಗಿ ಮೋಕ್ಷಾಳನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದು ಬಂದಿದೆ.

Also Read  ಜಿಲ್ಲಾ ನ್ಯಾಯಾಲಯ ಸಮುಚ್ಛಯದೊಳಗೆ ನುಗ್ಗಿದ ಅಪರಚಿತ ವ್ಯಕ್ತಿ

error: Content is protected !!
Scroll to Top