ವೈದ್ಯರ ಮುಷ್ಕರಕ್ಕೆ ಜಿಲ್ಲೆಯಲ್ಲಿ ಮೊದಲ ಬಲಿ ► ಪುತ್ತೂರಿನ ಕಾಲೇಜು ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ನ.17. ಕರ್ನಾಟಕ ಖಾಸಗಿ ಆಸ್ಪತ್ರೆ ನಿಯಂತ್ರಣ ತಿದ್ದುಪಡಿ ವಿಧೇಯಕ (ಕೆಪಿಎಂಇ) ವಿರುದ್ಧ ಖಾಸಗಿ ವೈದ್ಯರು ನಡೆಸುತ್ತಿರುವ ಮುಷ್ಕರದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ವಿದ್ಯಾರ್ಥಿನಿಯೋರ್ವರು ಮೊದಲ‌ ಬಲಿಯಾಗಿದ್ದಾರೆ.

ಮೃತರನ್ನು ಪುತ್ತೂರು ವಿವೇಕಾನಂದ ಕಾಲೇಜಿನ ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ಪೂಜಾ(19) ಎಂದು ಗುರುತಿಸಲಾಗಿದೆ. ಈಕೆ ತನ್ನ ಎರಡೂ ಕಿಡ್ನಿಗಳ ವೈಫಲ್ಯದಿಂದ ಬಳಲುತ್ತಿದ್ದು, ವಾರದಲ್ಲಿ ಎರಡು ಬಾರಿ ಡಯಾಲಿಸಿಸ್ ನಡೆಸಲಾಗುತ್ತಿತ್ತು. ಆದರೆ ವೈದ್ಯರ ಮುಷ್ಕರದಿಂದಾಗಿ ಡಯಾಲಿಸಿಸ್ ನಡೆಸಿರಲಿಲ್ಲವೆನ್ನಲಾಗಿದ್ದು, ಅನಾರೋಗ್ಯ ತೀವ್ರಗೊಂಡ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Also Read  ಅಂಗಾಂಗ ದಾನಿಗಳ ದಿನ - ಆಗೋಸ್ಟ್ 13 ➤ ಸತ್ತ ಬಳಿಕವೂ ಸಾರ್ಥಕತೆ ಪಡೆಯಿರಿ

ಸೂಕ್ತ ಸಮಯದಲ್ಲಿ ಚಿಕಿತ್ಸೆ ಲಭಿಸದ ಹಿನ್ನೆಲೆಯಲ್ಲಿ ಪೂಜಾ ಶುಕ್ರವಾರ ಮೃತಪಟ್ಟಿದ್ದಾರೆ.

error: Content is protected !!
Scroll to Top