ಆಫ್ರಿಕಾದಲ್ಲಿ ಸಿರಪ್ ಸೇವಿಸಿದ 66 ಮಕ್ಕಳು ಮೃತ್ಯು ➤‌ ಭಾರತೀಯ ಔಷಧ ಕಂಪನಿ ವಿರುದ್ದ ತನಿಖೆ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 06. ಭಾರತದಲ್ಲಿ ಉತ್ಪಾದಿಸಲಾದ ಕೆಮ್ಮು, ಶೀತಕ್ಕೆ ನೀಡುವ ಸಿರಪ್ ಸೇವಿಸಿ ಆಫ್ರಿಕಾದ ಗ್ಯಾಂಬಿಯಾದಲ್ಲಿ 66ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಶಂಕೆ ವ್ಯಕ್ತಪಡಿಸಿದ್ದು, ಈ ಬಗ್ಗೆ ಎಚ್ಚರಿಕೆ ನೀಡಿದಲ್ಲದೇ ತಕ್ಷಣವೇ ತನಿಖೆ ನಡೆಸಲು ಕೇಂದ್ರ ಔಷಧ ನಿಯಂತ್ರಕ ಮಂಡಳಿ(ಸಿಡಿಎಸ್​ಸಿಒ)ಗೆ ಸೂಚಿಸಿದೆ.


ಕೆಮ್ಮು ಮತ್ತು ಶೀತಕ್ಕೆ ಬಳಸುವ ಈ ನಾಲ್ಕು ಸಿರಪ್‌ಗಳು ಭಾರತದ ಹರಿಯಾಣದಲ್ಲಿನ ಮೇಡನ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್‌ ಕಂಪನಿಯಲ್ಲಿ ಉತ್ಪಾದಿಸಲ್ಪಟ್ಟಿವೆ ಎಂದು ಡಬ್ಲ್ಯುಎಚ್‌ಒ ಮಹಾನಿರ್ದೇಶಕ ಟೆಡ್ರೋಸ್ ಅಧಾನೊಮ್ ಗೆಬ್ರೆಯಸ್ ಜಿನೀವಾದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಭಾರತದ ಔಷಧ ನಿಯಂತ್ರಕ ಮಂಡಳಿ ಹೆಚ್ಚಿನ ತನಿಖೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ. ಕಲುಷಿತ ಕೆಮ್ಮಿನ ಔಷಧಿಗಳು ಸದ್ಯ ಗ್ಯಾಂಬಿಯಾದಲ್ಲಿ ಮಾತ್ರ ಪತ್ತೆಯಾಗಿವೆ. ಆದರೆ, ಇತರೆ ದೇಶಗಳಿಗೂ ಅದೇ ಕಂಪನಿಯ ಉತ್ಪನ್ನಗಳು ವಿತರಿಸಲ್ಪಟ್ಟಿರುವುದರಿಂದ ಎಚ್ಚರವಾಗಿರುವಂತೆ ವಿಶ್ವ ಆರೋಗ್ಯ ಸಂಸ್ಥೆ ಸೂಚಿಸಿದೆ. ಇದರ ಪ್ರಕಾರ, ಪ್ರೋಮೆಥಾಜಿನ್ ಓರಲ್ ಸಲ್ಯೂಷನ್, ಕೋಫೆಕ್ಸ್‌ಮಾಲಿನ್ ಮಕ್ಕಳ ಕೆಮ್ಮಿನ ಸಿರಪ್, ಮ್ಯಾಕೋಫ್ ಮಕ್ಕಳ ಕೆಮ್ಮಿನ ಸಿರಪ್ ಮತ್ತು ಮ್ಯಾಗ್ರಿಪ್ ಎನ್ ಕೋಲ್ಡ್ ಸಿರಪ್ ಈ ನಾಲ್ಕೂ ಉತ್ಪನ್ನದ ಮಾದರಿಗಳ ಪ್ರಯೋಗಾಲಯ ವಿಶ್ಲೇಷಣೆಯಲ್ಲಿ ಅವುಗಳು ಅಧಿಕ ಪ್ರಮಾಣದ ಡೈಥಿಲೀನ್ ಗ್ಲೈಕೋಲ್ ಮತ್ತು ಎಥಿಲೀನ್ ಗ್ಲೈಕೋಲ್ ಅನ್ನು ಒಳಗೊಂಡಿವೆ ಎಂಬುದು ಖಚಿತಪಟ್ಟಿದೆ.

Also Read  ಬೆಳ್ಳಾರೆ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ➤ ಆರೋಪಿ ಅಂದರ್- ಫೋಕ್ಸೋ ಕೇಸ್ ದಾಖಲು

error: Content is protected !!
Scroll to Top