ಕಲ್ಲಡ್ಕ: ಫ್ಲೈ ಓವರ್ ಕಾಮಗಾರಿಯ ನಿರ್ಮಾಣ ಹಂತದ ಪಿಲ್ಲರ್ ಕುಸಿತ

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಅ. 13. ಚತುಷ್ಪಥ ಹೆದ್ದಾರಿ ನಿರ್ಮಾಣದ ಕಾಮಗಾರಿ ವೇಳೆ ಕಲ್ಲಡ್ಕದಲ್ಲಿ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿಯ ನಿರ್ಮಾಣ ಹಂತದ ಪಿಲ್ಲರ್ ಹಠಾತ್ ಕುಸಿತಗೊಂಡ ಘಟನೆ ಅ.13 ರಂದು ಮಧ್ಯಾಹ್ನ ನಡೆದಿದೆ.

ಕಲ್ಲಡ್ಕ ಪೇಟೆಯಲ್ಲಿ ಕಳೆದ ಕೆಲ ತಿಂಗಳಿನಿಂದ ಫ್ಲೈ ಓವರ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಹಲವು ರೀತಿಯಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ಇದೀಗ ನಿರ್ಮಾಣ ಹಂತದ ಪಿಲ್ಲರ್ ಕಾಮಗಾರಿ ಕುಸಿದಿದ್ದು, ಈ ಘಟನೆಯ ನಂತರ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

 

Scroll to Top