ಮಂಗಳೂರು: ಡಿಸಿ ಕಛೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ಪ್ರವೀಣ್ ನೆಟ್ಟಾರು ಪತ್ನಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 13. ಬಿಜೆಪಿ ಯುವ ಮುಖಂಡ ದಿ/ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶಪತ್ರವನ್ನು ಅವರು ಸ್ವೀಕರಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿಯಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ. ನೂತನಕುಮಾರಿ ಅವರಿಗೆ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ‘ಸಿ’ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು. ಆದರೆ, ಅವರು ಮಂಗಳೂರಿನಲ್ಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ವಿನಂತಿಸಿಕೊಂಡ ಕಾರಣ, ಅವರ ಇಚ್ಛೆಯಂತೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆ.

Also Read  ಕಡಬ: ಕಬಡ್ಡಿಯನ್ನು ಪುನರಾಂಭಿಸುವಂತೆ ಕಡಬ ತಹಶೀಲ್ದಾರ್ ಗೆ ಅಮೆಚ್ಚೂರು ಕಬಡ್ಡಿ ಅಸೋಸಿಯೇಷನ್ ನಿಂದ ಮನವಿ

 

error: Content is protected !!
Scroll to Top