ರಾಜ್ಯಾದ್ಯಂತ ಮುಂದಿನ 5 ದಿನಗಳ ಭಾರೀ ಮಳೆ ಸಾಧ್ಯತೆ ➤‌ ಹವಾಮಾನ ಇಲಾಖೆ ಮುನ್ಸೂಚನೆ



(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.14. ರಾಜ್ಯಾದ್ಯಂತ ಮತ್ತೆ ವರುಣನ ಆರ್ಭಟ ಜೋರಾಗಿದ್ದು, ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.







ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರ್ಗಿ, ಕೊಪ್ಪಳ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗಲಿದ್ದು, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ 5 ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಿದೆ.






error: Content is protected !!
Scroll to Top