ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಲಾರಿ ► ಮಹಿಳಾ ಪೊಲೀಸ್ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮುರ್ಡೇಶ್ವರ, ನ.18. ಲಾರಿಯೊಂದು ಸ್ಕೂಟಿಗೆ ಢಿಕ್ಕಿ ಹೊಡೆದ ಪರಿಣಾಮ ಮಹಿಳಾ ಪೊಲೀಸ್ ಸಿಬ್ಬಂದಿಯೋರ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಮುರ್ಡೇಶ್ವರ ಮುಖ್ಯ ದ್ವಾರದ ಬಳಿ ಶುಕ್ರವಾರದಂದು ನಡೆದಿದೆ.

ಮೃತರನ್ನು ಮುರ್ಡೇಶ್ವರ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿ ಶ್ರೀಮತಿ ಮೃಧುಲಾ ಆಚಾರ್ಯ(37) ಎಂದು ಗುರುತಿಸಲಾಗಿದೆ. ಇವರು ತನ್ನ ದ್ವಿಚಕ್ರ ವಾಹನದಲ್ಲಿ ರಸ್ತೆ ದಾಟುತ್ತಿರುವಾಗ ಭಟ್ಕಳ ಕಡೆಯಿಂದ ಬಂದ ಲಾರಿಯು ಢಿಕ್ಕಿ ಹೊಡೆದಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತದೇಹವನ್ನು ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಈ ಬಗ್ಗೆ ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top