ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಗೆಲುವು !

(ನ್ಯೂಸ್ ಕಡಬ) newskadaba.com ದೆಹಲಿ, ಅ.19: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಶಶಿ ತರೂರ್ ಸೋಲು ಕಂಡಿದ್ದಾರೆ. ಈ ಮೊಲಕ ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾದಂತಾಗಿದೆ.

ಹಾಗೆಯೇ, ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ತರೂರ್ ಅವರಿಗೆ 1072 ಮತಗಳು ಲಭಿಸಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು ಪಡೆದುಕೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಹುದ್ದೆಗೆ ಅಕ್ಟೋಬರ್ 17ರಂದು ನಡೆದ ಮತದಾನದಲ್ಲಿ ಶೇ.96ರಷ್ಟು ಮತದಾನವಾಗಿತ್ತು. ಮತ ಚಲಾಯಿಸಲು ಅರ್ಹರಾದವರ ಪೈಕಿ 9500 ಕಾಂಗ್ರೆಸ್ ಮತದಾರರು ಚಲಾಯಿಸಿದ್ದರು.

Also Read  RAW ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ರವಿ ಸಿನ್ಹಾ ನೇಮಕ

error: Content is protected !!
Scroll to Top