ಅ.26ರಂದು ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪದಗ್ರಹಣ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.19: ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆಯ ಫಲಿತಾಂಶ ಇಂದು ಘೋಷಣೆಯಾಗಿತ್ತು. ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಭರ್ಜರಿ ಗೆಲುವು ಸಾಧಿಸಿದ್ದರು. ಇದೀಗ ಅವರು ಅಕ್ಟೋಬರ್ 26, 2022ರಂದು ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ.


ಕಳೆದ ಎರಡು ದಶಕಗಳಲ್ಲಿ ಕಾಂಗ್ರೆಸ್ ಪಕ್ಷವು ನೆಹರೂ-ಗಾಂಧಿ ಕುಟುಂಬದ ಹೊರಗಿನಿಂದ ತನ್ನ ಮೊದಲ ನಾಯಕನನ್ನು ಬುಧವಾರ ಆಯ್ಕೆ ಮಾಡಿದೆ. ಆದರೆ ಈ ಕ್ರಮವು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸವಾಲನ್ನು ಒಡ್ಡಲು ಕಾಂಗ್ರೆಸ್ ಪಕ್ಷಕ್ಕೆ ಸಹಾಯ ಮಾಡುವ ಸಾಧ್ಯತೆಗಳಿಲ್ಲ ಎನ್ನಲಾಗುತ್ತಿದೆ.

Also Read  ದೇಶದಲ್ಲಿ 'H3N2' ಜೊತೆಗೆ 'H1N1' ಪ್ರಕರಣಗಳಲ್ಲಿ ಹೆಚ್ಚಳ       ➤ ಆರೋಗ್ಯ ಸಚಿವಾಲಯ  

error: Content is protected !!
Scroll to Top