KSRTC ಸಿಬ್ಬಂದಿಗೆ ಗುಡ್​ ನ್ಯೂಸ್ ➤‌ 50 ಲಕ್ಷ ಅಪಘಾತ ವಿಮೆ ಯೋಜನೆ ಜಾರಿ

(ನ್ಯೂಸ್‌ ಕಡಬ) newskadaba.com ಬೆಂಗಳೂರು, ಅ.19: ಕೆಎಸ್​​ಆರ್​​ಟಿಸಿ ಸಿಬ್ಬಂದಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ಇದೇ ಮೊದಲ ಬಾರಿಗೆ ಕೆಎಸ್ ಆರ್ ಟಿಸಿ ಸಿಬಂದಿಗಳು & ಅವರ ಅವಲಂಬಿತರಿಗಾಗಿ 50 ಲಕ್ಷ ರೂ. ಅಪಘಾತ ವಿಮೆ ಪ್ಯಾಕೇಜ್ ಯೋಜನೆಯ ಒಡಂಬಡಿಕೆಗೆ ಬುಧವಾರ ಸಹಿ ಹಾಕಲಾಗಿದೆ. ಸಂಸ್ಥೆಗಾಗಿ ಹಗಲಿರುಳು ದುಡಿಯುವ ಸಿಬಂದಿಗಳ ಆಕಸ್ಮಿಕ ಅಗಲಿಕೆಯು ಅಥವಾ ಅಂಗವೈಕಲ್ಯತೆಯು ಅವರ ಪರಿವಾರದವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದೆಂಬ ಕಾರಣದಿಂದ ಅವರ ಅವಲಂಬಿತರ ಹಿತ ಕಾಪಾಡುವ ಈ ಅಪಘಾತ ವಿಮಾ ಪ್ಯಾಕೇಜ್ ಯೋಜನೆಯ ಒಡಂಬಡಿಕೆಯನ್ನು ಜಾರಿಗೆ ತಂದಿದೆ.

Also Read  ಇಂದಿನಿಂದ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಶಾಸಕ, ಕೆಎಸ್ ಆರ್ ಟಿಸಿ ಅಧ್ಯಕ್ಷರಾದ ಎಂ. ಚಂದ್ರಪ್ಪರವರ ಸಮ್ಮುಖದಲ್ಲಿ ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಡಿಜಿಎಂ ಪಂಕಜ್ ತಪ್ಲಿಯಾಲ್ ಅವರು ಈ ಅಪಘಾತ ವಿಮಾ ಪ್ಯಾಕೇಜ್ ಯೋಜನೆಗೆ ಸಹಿ ಹಾಕಿದರು.

error: Content is protected !!
Scroll to Top