ಕಡಬ: ಮಹಿಳೆಯ ಮಾನಭಂಗಕ್ಕೆ ಯತ್ನ ➤‌ ಇಬ್ಬರ ವಿರುದ್ಧ ಪ್ರಕರಣ ದಾಖಲು



(ನ್ಯೂಸ್ ಕಡಬ) newskadaba.com ಕಡಬ, ಅ.21. ಬೆಡ್ ಶೀಟ್ ಮಾರಾಟದ ನೆಪದಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಗಳ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







ತಾಲೂಕಿನ ದೋಲ್ಪಾಡಿ ಗ್ರಾಮದ ಕಾಯರ್ ಮನೆ ಎಂಬಲ್ಲಿಗೆ ಕಾರಿನಲ್ಲಿ ಬಂದ ಆರೋಪಿಗಳಾದ ರಫೀಕ್‌ ಹಾಗೂ ರಮಿಯಾಸುದ್ದೀನ್ ಎಂಬವರು ಬೆಡ್ ಶೀಟ್ ಮಾರಾಟದ ನೆಪದಲ್ಲಿ ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದು, ಮಹಿಳೆ ವಿರೋಧಿಸಿದಾಗ ಮೈ, ಕೈ ಮುಟ್ಟಿ ಮಾನಭಂಗಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹೊಡೆದಾಗ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಮಹಿಳೆ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 

error: Content is protected !!
Scroll to Top