ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ್ ಮಾಮನಿ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23: ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ, ಸವದತ್ತಿ ಶಾಸಕ ಆನಂದ್ ಮಾಮನಿ (56) ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ್ ಮಾಮನಿ ಅವರು ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮಧ್ಯರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಆನಂದ ಮಾಮನಿ ಅವರು ಕ್ಯಾನ್ಸರ್ ಕಾಯಿಲೆಯಿಂದಾಗಿ ಕೆಲ ದಿನಗಳಿಂದ ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರನ್ನು ಬೆಂಗಳುರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.

Also Read  ಕಲಬುರಗಿ: ಮೃತಪಟ್ಟ ವೃದ್ದನ ಕುಟುಂಬದವರಿಗೆ ಕೊರೋನ ಪಾಸಿಟಿವ್

ಆನಂದ್ ಮಾಮನಿ ಅವರ ಪಾರ್ಥಿವ ಶರೀರವನ್ನು ಅಂಬ್ಯುಲೆನ್ಸ್​ ಮೂಲಕ ಸವದತ್ತಿಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ. ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಭಾನುವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

error: Content is protected !!
Scroll to Top