ಅತಿಯಾದ ಇಯರ್ ಫೋನ್ ಬಳಕೆಯಿಂದ ಉಂಟಾಗುವ ಸಮಸ್ಯೆಗಳೇನು ಗೊತ್ತ ?

(ನ್ಯೂಸ್ ಕಡಬ) newskadaba.com ಅ.24: ಪ್ರಸ್ತುತ ಜಗತ್ತಿನಲ್ಲಿ ಯುವಜನತೆ ಮೊಬೈಲ್ ವೈಶಿಷ್ಟ್ಯಗಳಿಗೆ ಮಾರುಹೋಗಿರುವ ಹಿನ್ನೆಲೆ ಅನೇಕರು ಸ್ಮಾರ್ಟ್ ಫೋನ್ ಬಳಕೆ ಮಾಡುತ್ತಿದ್ದಾರೆ. ಸೌಂಡ್ ಬಂದರೆ ಬೇರೆಯವರಿಗೆ ತೊಂದರೆ ಆಗುತ್ತದೆ ಎಂದು ಭಾವಿಸಿ ಹೆಚ್ಚಿನವರು ಹಾಡುಗಳನ್ನು ಆಸ್ವಾದಿಸಲು ಇಯರ್ ಫೋನ್ ಬಳಸುತ್ತಾರೆ. ಈ ಸಾಧನವನ್ನು ಸೀಮಿತವಾಗಿ ಬಳಸಿದರೆ ತೊಂದರೆ ಇಲ್ಲ. ಅದರೆ ಅತಿಯಾಗಿ ಬಳಸುವವರು ಈ ಮುನ್ನೆಚ್ಚರಿಕೆಗಳನ್ನು ಅನುಸರಿಸದಿದ್ದರೆ ಮುಂದೆ ಶ್ರವಣ ಸಮಸ್ಯೆ ಜೊತೆಗೆ ಇನ್ನಷ್ಟು ಸಮಸ್ಯೆಗಳು ಎದುರಾಗಲಿವೆ ಎಂದು ತಜ್ಞರ ಹೇಳುತ್ತಾರೆ. ವಿಶ್ವ ಆರೋಗ್ಯ ಸಂಸ್ಥೆ (WHO)ಯೂ ಎಚ್ಚರಿಕೆ ನೀಡಿದೆ.

ಇಯರ್‌ಫೋನ್‌ಗಳ ಅತಿಯಾದ ಬಳಕೆ ಕಿವಿಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಕಿವಿಯಲ್ಲಿ ನೋವನ್ನು ಉಂಟುಮಾಡಬಹುದು. ಕ್ರಮೇಣ ಈ ಸಮಸ್ಯೆ ಹೆಚ್ಚಾಗಬಹುದು. ಕೆಲವರಿಗೆ ತಲೆಸುತ್ತು ಬರಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಇತರರು ಬಳಸಿದ ಇಯರ್‌ಫೋನ್‌ಗಳನ್ನು ಬಳಸುವುದು ಸೋಂಕುಗಳಿಗೆ ಕಾರಣವಾಗಬಹುದು.

Also Read  ವಿಎಲ್​ಸಿ ಮೀಡಿಯಾ ಪ್ಲೇಯರ್ ನಿಷೇಧ ವಾಪಸ್‌ ಪಡೆದ ಸರ್ಕಾರ


ಇಯರ್‌ಫೋನ್‌ಗಳನ್ನು ಬಳಸುವಾಗ ಧ್ವನಿ ಕಡಿಮೆ ಇಡಬೇಕು. ವಾಲ್ಯೂಮ್ 60 ಡೆಸಿಬಲ್‌ಗಳಿಗಿಂತ ಕಡಿಮೆಯಿದೆ ಎಂದು ಖಚಿತಪಡಿಸಿಕೊಳ್ಳಿ. 85 ಡೆಸಿಬಲ್‌ಗಿಂತ ಹೆಚ್ಚಿನ ಶಬ್ದವು ಶ್ರವಣ ನಷ್ಟಕ್ಕೆ ಕಾರಣವಾಗಬಹುದು. ಫೋನ್ ಸೆಟ್ಟಿಂಗ್‌ಗಳಲ್ಲಿ ವಾಲ್ಯೂಮ್ ಅನ್ನು ಶೇಕಡಾ 50 ರಷ್ಟು ಇರಿಸಿ. ನೀವು ಧ್ವನಿಯನ್ನು ಹೆಚ್ಚಿಸಲು ಪ್ರಯತ್ನಿಸಿದರೆ ನಿಮಗೆ ಎಚ್ಚರಿಕೆ ಬರುತ್ತದೆ. ಆ ಸಂದರ್ಭದಲ್ಲಿ ನಾವು ನಮ್ಮ ಧ್ವನಿಯನ್ನು ಮಿತಿಯಲ್ಲಿಟ್ಟುಕೊಂಡು ಹಾಡುಗಳನ್ನು ಕೇಳಬಹುದು.

error: Content is protected !!
Scroll to Top