ಬ್ರಿಟನ್ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆ

(ನ್ಯೂಸ್ ಕಡಬ) newskadaba.com ಲಂಡನ್, ಅ. 25. ಬ್ರಿಟನ್‌ ರಾಜಕಾರಣಿ, ಭಾರತ ಮೂಲದ ರಿಷಿ ಸುನಕ್ ಅವರು ಬ್ರಿಟನ್ ದೇಶದ ಮುಂದಿನ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.


ಸುಮಾರು 200 ವರ್ಷಗಳಿಗೂ ಹೆಚ್ಚು ಭಾರತವನ್ನು ಆಡಳಿತ ಮಾಡಿದ್ದ ಬ್ರಿಟನ್‌ಗೆ ಇದೀಗ ಇದೇ ಮೊದಲ ಬಾರಿಗೆ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಆಡಳಿತ ನಡೆಸುವಂತಾಗಿದೆ. ರಿಷಿ ಸುನಕ್ ಅವರು ಇನ್ಫೋಸಿಸ್ ಕಂಪನಿ ಸ್ಥಾಪಕರಾದ ನಾರಾಯಣ ಮೂರ್ತಿ ಹಾಗೂ ಸುಧಾಮೂರ್ತಿ ಅವರ ಅಳಿಯರಾಗಿದ್ದಾರೆ. ಇನ್ನು ಕೇವಲ 45 ದಿನ ಆಡಳಿತ ನಡೆಸಿ ನಿರ್ಗಮಿಸಿದ ಲಿಜ್ ಟ್ರಸ್ ಅವರಿಂದ ರಾಜಕೀಯ ಬಿಕ್ಕಟ್ಟು ಏರ್ಪಟ್ಟಿದ್ದು, ಬ್ರಿಟನ್‌ನ ಟೋರಿ ನಾಯಕತ್ವಕ್ಕಾಗಿ ಒಟ್ಟು ಬಲದ ಅರ್ಧಕ್ಕೂ ಹೆಚ್ಚು ಸಂಸದರು ರಿಷಿ ಸುನಕ್ ಅವರು ಪ್ರಧಾನಿಯಾಗಲು ಗ್ರೀನ್ ಸಿಗ್ನಲ್ ಕೊಟಿದ್ದಾರೆ.

Also Read  ಇಂದಿನಿಂದ ಫೆಬ್ರವರಿ 19ರ ವರೆಗೆ ಕಡಬದಲ್ಲಿ ದ್ವಾದಶ ಜ್ಯೋತಿರ್ಲಿಂಗ ದರ್ಶನ ➤ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ನೇತೃತ್ವ

error: Content is protected !!
Scroll to Top