ಕಾಂಗ್ರೆಸ್ ಅಧ್ಯಕ್ಷರಾಗಿ ನಾಳೆ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಅ.25: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನಾಳೆ ಬುಧವಾರ (ಅಕ್ಟೋಬರ್ 26) ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದಕ್ಕೂ ಮೊದಲು ಅವರು ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಕರ್ನಾಟಕದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಸಿ ಸೇರಿದಂತೆ ಹಲವು ನಾಯಕರು ಸಾಕ್ಷಿಯಾಗಲಿದ್ದಾರೆ. ಅಕ್ಟೋಬರ್ 17ರಂದು ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು 7897 ಮತಗಳನ್ನು ಪಡೆದು ಗೆದ್ದಿದ್ದರೆ, ಅವರ ಸ್ಪರ್ಧಿ ಶಶಿ ತರೂರ್ ಅವರ 1072 ಮತಗಳನ್ನು ಪಡೆಯಲಷ್ಟೇ ಶಕ್ಯರಾಗಿದ್ದರು.

error: Content is protected !!

Join the Group

Join WhatsApp Group