ಮಂಗಳೂರು: ಪಾದಚಾರಿ ವ್ಯಕ್ತಿಗೆ ಲಾರಿ ಢಿಕ್ಕಿ ➤‌ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com
ಮಂಗಳೂರು, ಅ. 26. ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಲಾರಿಯೊಂದು ಢಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮುಂಜಾನೆ ನಡೆದಿದೆ.


ಇಂದು ಮುಂಜಾನೆ ಅಶೋಕನಗರದ ನಿವಾಸಿ ಎನ್ನಲಾದ ಸುಮಾರು 40-45 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ತನ್ನ ಆ್ಯಕ್ಟಿವಾ ದ್ವಿಚಕ್ರ ವಾಹನವನ್ನು ಕೊಟ್ಟಾರ ಚೌಕಿಯ ರಸ್ತೆ ಪಕ್ಕ ನಿಲ್ಲಿಸಿ ವಾಕಿಂಗ್ ನಿರತರಾಗಿದ್ದ ವೇಳೆ ಹರ್ಯಾಣದ ನೋಂದಣಿ ಹೊಂದಿದ ಲಾರಿಯೊಂದು ಢಿಕ್ಕಿ ಹೊಡೆದಿದೆ. ಇದರಿಂದ ಪಾದಚಾರಿ ವ್ಯಕ್ತಿಯು ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಗಾಯಾಳು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.‌

Scroll to Top