(ನ್ಯೂಸ್ ಕಡಬ) newskadaba.com ಅ.28: ಟೆಸ್ಲಾ ಕಂಪನಿಯ ಮುಖ್ಯಸ್ಥ ಎಲಾನ್ ಮಸ್ಕ್ ಟ್ವಿಟ್ಟರ್ ಕಂಪನಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಬೆನ್ನಲ್ಲೇ ಸಿಇಒ ಪರಾಗ್ ಅಗರ್‌ವಾಲ್ & ಅದರ ಉನ್ನತ ಅಧಿಕಾರಿಗಳನ್ನು ವಜಾಗೊಳಿಸಿದ್ದಾರೆ. ಟ್ವಿಟರ್ ಸಿಇಒ ಪರಾಗ್ ಅಗರ್‌ವಾಲ್ ಜೊತೆ ಕಾನೂನು, ನೀತಿ ಮತ್ತು ಟ್ರಸ್ಟ್ ಮುಖ್ಯಸ್ಥರಾದ ವಿಜಯ ಗದ್ದೆ, ಮುಖ್ಯ ಹಣಕಾಸು ಅಧಿಕಾರಿ ನೆಡ್ ಸೆಗಲ್ ಸೇರಿದಂತೆ ಪ್ರಮುಖರನ್ನು ವಜಾ ಮಾಡಲಾಗಿದೆ ಎಂದು ವರದಿಯಾಗಿದೆ.
ಕಂಪನಿಯ ಸಿಇಒ ಜಾಕ್ ಡೋರ್ಸೆ ರಾಜೀನಾಮೆ ನೀಡಿದ ಬೆನ್ನಲ್ಲೇ ಭಾರತೀಯ ಮೂಲದ ಪರಾಗ್ ಅಗರ್‌ವಾಲ್ ಕಂಪನಿಯ ಸಿಇಒ ಸ್ಥಾನವನ್ನು ಅಲಂಕರಿಸಿದ್ದರು. ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಟ್ವಿಟ್ಟರ್‌ನಿಂದ ಶಾಶ್ವತವಾಗಿ ಗೇಟ್‌ಪಾಸ್ ನೀಡುವ ಸಂಬಂಧ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಜಯ ಗದ್ದೆ ಪ್ರಮುಖ ಪಾತ್ರವನ್ನು ವಹಿಸಿದ್ದರು. ಟ್ವಿಟ್ಟರ್ ಕಂಪನಿ ತಮ್ಮ ತೆಕ್ಕೆ ಬಂದ ಬೆನ್ನಲ್ಲೇ ಮಸ್ಕ್ ಹಕ್ಕಿ ಈಗ ಮುಕ್ತವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.