ಇಂದಿನಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ➤‌ ಪ್ರತಿ ಲೀಟರ್​ಗೆ 40 ಪೈಸೆ ಕುಸಿತ

(ನ್ಯೂಸ್ ಕಡಬ) newskadaba.com ನ.01: ಕಳೆದ ಐದೂವರೆ ತಿಂಗಳಿನಿಂದ ಯಥಾಸ್ಥಿತಿಯಲ್ಲಿದ್ದ ಪೆಟ್ರೋಲ್ & ಡೀಸೆಲ್ ಬೆಲೆ ಇಂದು ಕುಸಿತವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತುಸು ಇಳಿಕೆಯಾಗಿದ್ದು, ಇಂದಿನಿಂದ (ನ.1) ಹೊಸ ದರ ಜಾರಿಗೆ ಬರಲಿದೆ. ಮೇ 22ರಂದು ಕೇಂದ್ರ ಸರ್ಕಾರವು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿತ್ತು. ಇದಾದ ನಂತರ ಇದೀಗ 40 ಪೈಸೆ ಇಳಿಕೆ ಮಾಡಿದ್ದು, ಇಂದು ಬೆಳಗ್ಗೆ 6 ಗಂಟೆಯಿಂದ ಹೊಸ ಬೆಲೆ ಜಾರಿಗೆ ಬಂದಿದೆ.

ಬೆಂಗಳೂರಿನಲ್ಲಿ ಇಂದಿನ ಪೆಟ್ರೋಲ್ ದರ 101.52 ರೂ. ಆಗಿದೆ. ಡಿಸೇಲ್ ಬೆಲೆ 87.47 ರೂ. ಆಗಿದೆ. ದೆಹಲಿಯಲ್ಲಿ ಪೆಟ್ರೋಲ್ 96.65 ರೂ ಮತ್ತು ಡೀಸೆಲ್ ಲೀಟರ್‌ಗೆ 89.82 ರೂ., ಮುಂಬೈನಲ್ಲಿ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ ಲೀಟರ್‌ಗೆ 94.27 ರೂ., ಚೆನ್ನೈನಲ್ಲಿ ಪೆಟ್ರೋಲ್ 102.63 ರೂ ಮತ್ತು ಡೀಸೆಲ್ ಲೀಟರ್‌ಗೆ 94.24 ರೂ., ಆಗಿದೆ. ಕಚ್ಚಾ ತೈಲದ ಬೆಲೆಯು ಕೆಲವು ಸಮಯದಿಂದ ಪ್ರತಿ ಬ್ಯಾರೆಲ್‌ಗೆ 95 ಡಾಲರ್‌ಗಿಂತ ಕಡಿಮೆಯಾಗಿದೆ. 5 ತಿಂಗಳಿಗೂ ಹೆಚ್ಚು ಕಾಲ ಸ್ಥಿರವಾಗಿ ಹಿಡಿದ ನಂತರ ಇಂಧನ ಬೆಲೆಯಲ್ಲಿ ಇಳಿಕೆಯಾಗಿದೆ.

Also Read  ನಿರ್ಭಯಾ ಅಪರಾಧಿಗಳಿಗೆ ಮಾ.20ರಂದು ಗಲ್ಲು ಖಚಿತಗೊಳಿಸಿದ ಸುಪ್ರೀಂ

error: Content is protected !!
Scroll to Top