ಭಾರತದಲ್ಲಿ ಇಂದು ಡಿಜಿಟಲ್‌ ರುಪಿ ಬಿಡುಗಡೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ.01: ಬಜೆಟ್‌ನಲ್ಲಿ ಘೋಷಣೆಯಾದಂತೆ ಭಾರತದಲ್ಲಿ ಡಿಜಿಟಲ್‌ ರುಪಿ ಅಧಿಕೃತವಾಗಿ ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಸಗಟು ಕ್ಷೇತ್ರಕ್ಕೆ ರುಪಿಯನ್ನು ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹಣಕಾಸು ಕ್ಷೇತ್ರದಲ್ಲಿ ಕ್ರಾಂತಿ ಮಾಡಬಹುದು ಎಂದು ವಿಶ್ಲೇಷಣೆಯಾಗುತ್ತಿರುವ ಡಿಜಿಟಲ್‌ ರುಪಿಯ ಬಗ್ಗೆ ಇಲ್ಲಿ ಕೆಲ ಮಾಹಿತಿಯನ್ನು ನೀಡಲಾಗಿದೆ.

ಸರಳವಾಗಿ ಹೇಳುವುದಾದರೆ ಡಿಜಿಟಲ್‌ ರೂಪದಲ್ಲಿರುವ ಹಣ. ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ ಅಥವಾ ಡಿಜಿಟಲ್‌ ರುಪಿಯನ್ನು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಬಿಡುಗಡೆ ಮಾಡುತ್ತದೆ. 2022ರ ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಡಿಜಿಟಲ್‌ ಕರೆನ್ಸಿಯನ್ನು ಆರ್‌ಬಿಐ ಬಿಡುಗಡೆ ಮಾಡಲಿದೆ ಎಂದು ತಮ್ಮ ಭಾಷಣದಲ್ಲಿ ತಿಳಿಸಿದ್ದರು. CBDC ಯನ್ನು ಎರಡು ವಿಧಗಳಾಗಿ ವಿಂಗಡಿಸಲಾಗಿದೆ. ಚಿಲ್ಲರೆ ಬಳಕೆ ಎಲ್ಲರಿಗೂ ಲಭ್ಯವಾದರೆ ಸಗಟು ಅನ್ನು ಆಯ್ದ ಹಣಕಾಸು ಸಂಸ್ಥೆಗಳ ಬಳಕೆಗೆ ಮಾತ್ರ ಅನುಮತಿ ನೀಡಲಾಗಿದೆ.

Also Read  ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಹೆಣ್ಣು ಚೀತಾ ಧಾತ್ರಿ ಸಾವು

ಮೊದಲ ಹಂತದಲ್ಲಿ ಎಸ್‌ಬಿಐ, ಬ್ಯಾಂಕ್‌ ಆಫ್‌ ಬರೋಡಾ, ಎಚ್‌ಡಿಎಫ್‌ಸಿ, ಐಸಿಐಸಿಐ, ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ, ಕೋಟಕ್‌ ಮಹೀಂದ್ರಾ ಬ್ಯಾಂಕ್‌, ಯಸ್‌ ಬ್ಯಾಂಕ್‌ ಐಡಿಎಫ್‌ಸಿ ಫಸ್ಟ್‌ ಬ್ಯಾಂಕ್‌ ಮತ್ತು ಎಚ್‌ಎಸ್‌ಬಿಸಿ ಸೇರಿದಂತೆ 9 ಬ್ಯಾಂಕ್‌ಗಳಿಗೆ ಡಿಜಿಟಲ್‌ ರುಪಿಯನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರಿ ಬಾಂಡ್‌ಗಳ ಖರೀದಿ ಮತ್ತು ಮಾರಾಟ ಮಾಡಲು ಇದನ್ನು ಬಳಸಲಾಗುತ್ತದೆ. ಸದ್ಯಕ್ಕೆ ಸರ್ಕಾರಿ ಸೆಕ್ಯುರಿಟಿಗಳ ವಹಿವಾಟಿಗೆ ಮಾತ್ರ ಡಿಜಿಟಲ್‌ ಕರೆನ್ಸಿ ಬಳಕೆಗೆ ಅನುಮತಿ ನೀಡಲಾಗಿದೆ.


ಬಹಳ ಮುಖ್ಯವಾಗಿ ಬಿಟ್‌ ಕಾಯಿನ್‌ ಇತ್ಯಾದಿ ಕ್ರಿಪ್ಟೋ ಕರೆನ್ಸಿಗಳ ನಿಯಂತ್ರಣ ಯಾರ ಬಳಿಯು ಇರುವುದಿಲ್ಲ. ಆಗಾಗ ಏರಿಳಿತ ಸಂಭವಿಸುತ್ತಿರುತ್ತದೆ. ಆದರೆ ಡಿಜಿಟಲ್‌ ರುಪಿ ವ್ಯವಸ್ಥೆಯ ಮೇಲೆ ಆರ್‌ಬಿಐ ಸಂಪೂರ್ಣ ನಿಯಂತ್ರಣ ಹೊಂದಿರುತ್ತದೆ. ವಹಿವಾಟು ಶುಲ್ಕ ಇಳಿಕೆಯಾಗುವುದರಿಂದ ಎರಡು ಬ್ಯಾಂಕುಗಳ ನಡುವಿನ ವ್ಯವಹಾರ ಮತ್ತಷ್ಟು ಸರಳವಾಗಲಿದೆ. ಮುದ್ರಣ ವೆಚ್ಚ ಇರುವುದಿಲ್ಲ ಮತ್ತು ಹಾಳಾಗುವುದಿಲ್ಲ. ಅಷ್ಟೇ ಅಲ್ಲದೇ ಸಾಗಾಟ ಮಾಡುವ ಅವಶ್ಯಕತೆ ಇಲ್ಲ. ಇವುಗಳನ್ನು ಕಳ್ಳತನ ಮಾಡಲು ಸಾಧ್ಯವಿಲ್ಲ. ನಕಲಿ ನೋಟುಗಳ ಹಾವಳಿ ಕಡಿಮೆಯಾಗಲಿದೆ.

error: Content is protected !!
Scroll to Top