IND vs BAN T20| ರೋಚಕ ಪಂದ್ಯದಲ್ಲಿ ಬಾಂಗ್ಲಾ ಮಣಿಸಿದ ಟೀಂ ಇಂಡಿಯಾ

(ನ್ಯೂಸ್ ಕಡಬ) newskadaba.com ನವದೆಹಲಿ, ನ.02: ಬುಧವಾರ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ಮಳೆ ಪೀಡಿತ ಈ ರೋಚಕ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶವನ್ನು ಐದು ರನ್‌ಗಳಿಂದ ಸೋಲಿಸುವುದರೊಂದಿಗೆ ಸೆಮಿಫೈನಲ್‌ ಹಾದಿಯನ್ನು ಸುಗಮಗೊಳಿಸಿಕೊಂಡಿದೆ. ಈ ಪಂದ್ಯದಲ್ಲಿ ಬಾಂಗ್ಲಾದೇಶ ಟಾಸ್ ಗೆದ್ದು ಭಾರತವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಟೀಂ ಇಂಡಿಯಾ 20 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು. ಉತ್ತರವಾಗಿ ಬಾಂಗ್ಲಾದೇಶ 145 ರನ್ ಗಳಿಸಲಷ್ಟೇ ಶಕ್ತವಾಯಿತು.

ಭಾರತದ ಪರ ಮತ್ತೊಮ್ಮೆ ವಿರಾಟ್ ಕೊಹ್ಲಿ ಬ್ಯಾಟ್ ಅಬ್ಬರಿಸಿತು. ಕಿಂಗ್ ಕೊಹ್ಲಿ ಈ ವಿಶ್ವಕಪ್‌ನಲ್ಲಿ ತಮ್ಮ ಮೂರನೇ ಅರ್ಧಶತಕ ಗಳಿಸಿದಲ್ಲದೆ 64 ರನ್ ಗಳಿಸಿ ಅಜೇಯರಾಗಿ ಉಳಿದರು. ಇವರನ್ನು ಹೊರತುಪಡಿಸಿ ಆರಂಭಿಕ ಆಟಗಾರ ಕೆಎಲ್ ರಾಹುಲ್ ತಮ್ಮ ಫಾರ್ಮ್‌ಗೆ ಮರಳಿದ್ದು, ಅವರೂ ಸಹ ಅರ್ಧಶತಕ ಬಾರಿಸಿದರು.

Also Read  ಭಾರತ - ನ್ಯೂಝಿಲೆಂಡ್ ಟ್ವೆಂಟಿ-20 ಸರಣಿ ಪಂದ್ಯ ► 6 ರನ್‌ಗಳ ಜಯದೊಂದಿಗೆ ಸರಣಿ ಗೆದ್ದ ಭಾರತ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಭಾರತ ಮೊದಲ ಆರು ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 37 ರನ್ ಗಳಿಸಿತು. ಎಂಟು ಎಸೆತಗಳನ್ನು ಎದುರಿಸಿದ ರೋಹಿತ್ ಕೇವಲ ಎರಡು ರನ್ ಗಳಿಸಿ ತಮ್ಮ ವಿಕೆಟ್ ಒಪ್ಪಿಸಿದರು.

error: Content is protected !!
Scroll to Top